Thursday, August 20, 2026

BDA Apartments

Home Front Page ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್...

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ..

ಮೈಸೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಬಿಜೆಪಿಯವರೇ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದರು.jk-logo-justkannada-logo

ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಗಲಭೆಗೆ ಸಂಬಂಧಪಟ್ಟಂತೆ ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಕೋವಿಡ್ -19 ಸಂಬಂಧ ಹಗರಣದ ಗಮನ ಬೇರೆಡೆ ಸೆಳೆಯಲು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ಪಿ. ನವೀನ್ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಯಾಗಿದ್ದರೂ ಆತ ಓರ್ವ ಆರ್ ಎಸ್ ಎಸ್ ಕಾರ್ಯಕರ್ತ. ಈತ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಅನ್ನು ಪೋಸ್ಟ್ ಮಾಡಿದ್ದನು. ಘಟನೆ ಸಂಬಂಧ ದೂರು ನೀಡಲು ಹೋದಾಗ ದೂರು ದಾಖಲಿಸಲು ವಿಳಂಬ ಮಾಡಿರುವುದೇ ಪರಿಸ್ಥಿತಿ ಕೈ ಮೀರಲು ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಗೆಯೇ ಡಿ.ಜೆ.ಹಳ್ಳಿ, ಕೆ.ಜಿ. ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ. ಈ ಘಟನೆಯನ್ನು ಬಿಜೆಪಿ ರಾಜಕೀಯ ಲಾಭವಾಗಿ ಬಳಸಿಕೊಳ್ಳುತ್ತಿದೆ. ಬಿ.ಎಸ್ ಯಡಿಯೂರಪ್ಪ ಅವರನ್ನು ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ಇದರ ಹಿಂದಿದೆ. ಘಟನೆಯನ್ನು ನಾವು ಖಂಡಿಸುತ್ತೇವೆ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.bjp-responsible-dj-halli-kg-halli-riots-mysore-kpcc-spokesperson-m-laxman

 

Key words:  BJP – responsible – DJ halli- KG halli-riots- mysore-KPCC spokesperson -M. Laxman