Sunday, October 18, 2026

Dasara Wishes

Happy Dasara
Home Front Page ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಕಾಂಗ್ರೆಸ್ ನಿಯೋಗದಿಂದ ಭೇಟಿ ಪರಿಶೀಲನೆ…

ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಕಾಂಗ್ರೆಸ್ ನಿಯೋಗದಿಂದ ಭೇಟಿ ಪರಿಶೀಲನೆ…

ಬೆಂಗಳೂರು,ಆ,15,2020(www.justkannada.in): ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರದೇಶಗಳಿಗೆ ಇಂದು ಕಾಂಗ್ರೆಸ್ ನಾಯಕರ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.jk-logo-justkannada-logo

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ  ಕಾಂಗ್ರೆಸ್ ನಾಯಕರು  ಹಾನಿಗೀಡಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸ ಮತ್ತು ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಹರಿಪ್ರಸಾದ್, ಕೃಷ್ಣೇಭೈರೇಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ಗಲಭೆ ಕುರಿತು ಪೊಲೀಸ್ ಅಧಿಕಾರಿಗಳು ಮಾಜಿ ಡಿಸಿಎಂ ಪರಮೇಶ್ವರ್ ಗೆ ವಿವರಿಸಿದರು.

ಪರಮೇಶ್ವರ್ ನಿಯೋಗ ಭೇಟಿ ಬಳಿಕ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಗಲಭೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಬಂಧ ಪ್ರತಿಕ್ರಿಯಿಸಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪಕ್ಷದ ನಾಯಕರು ಬೆಂಬಲಕ್ಕೆ ನಿಂತಿದ್ದಾರೆ. ಘಟನೆ ಬಗ್ಗೆ ಮೊದಲು ತನಿಖೆಯಾಗಲಿ. ಬಳಿಕ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನನಗೆ ಯಾರ ಮೇಲೂ ಅಸಮಾಧಾನವಿಲ್ಲ ಎಂದು ಹೇಳಿದರು.

Key words: DJ halli- KG halli-riot case- congress- delegation- visit