Sunday, October 18, 2026

Dasara Wishes

Happy Dasara
Home Front Page ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯದಲ್ಲಿ ಚೇತರಿಕೆ: ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅಭಿಜಿತ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯದಲ್ಲಿ ಚೇತರಿಕೆ: ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅಭಿಜಿತ್ ಮುಖರ್ಜಿ

ಬೆಂಗಳೂರು, ಆಗಸ್ಟ್ 16, 2020 (www.justkannada.in): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಈ ಕುರಿತು  ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತಮ್ಮ ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಣಬ್ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.