Sunday, August 23, 2026

BDA Apartments

Home Crime ಮೇಲಾಧಿಕಾರಿಗಳ ಕಿರುಕುಳ ಆರೋಪ: ತಾಲ್ಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು ….

ಮೇಲಾಧಿಕಾರಿಗಳ ಕಿರುಕುಳ ಆರೋಪ: ತಾಲ್ಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು ….

ಮೈಸೂರು, ಆಗಸ್ಟ್, 20, 2020(www.justkannada.in): ಮೇಲಾಧಿಕಾರಿಗಳ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. jk-logo-justkannada-logo

ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ನಾಗೇಂದ್ರ (43) ಆತ್ಮಹತ್ಯೆಗೆ ಶರಣಾದವರು. ನಗರದ ಆಲನಹಳ್ಳಿ ಲೇ ಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದ ಇವರು ಯಾರು ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾರೆ.  ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಆರೋಪ ಕೇಳಿಬಂದಿದೆ.mysore-accused-harassment-committed-suicide-health-officer

ನಂಜನಗೂಡಿನಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾಗೇಂದ್ರ ಕೋವಿಡ್ 19 ಸಂದರ್ಭದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ಒತ್ತಡದ ಕುರಿತು ಕುಟುಂಬದವರೊಡನೆ ಅಳಲು ತೋಡಿಕೊಂಡಿದ್ದರು. ಹಬ್ಬದ ದಿನವೂ ಕೆಲಸಕ್ಕೆ ಹೋಗಬೇಕು ಎಂದು ಕುಟುಂಬದವರೊಡನೆ ಬೇಸರ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ. ಮೃತ ನಾಗೇಂದ್ರ ಪತ್ನಿ ಹಾಗೂ 10 ವರ್ಷದ ಮಗಳನ್ನು ಅಗಲಿದ್ದಾರೆ.

Key words :mysore- Accused-harassment-committed-suicide-Health Officer.