Sunday, August 23, 2026

BDA Apartments

Home Front Page ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ…

ಬೆಂಗಳೂರು,ಆ.28, 2020(www.justkannada.in) ; ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ, ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

jk-logo-justkannada-logo

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದಿದ್ದಾರೆ.

ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

key words ; Establishment-Raiyanna-Statue-Govt-Controversy-Negligence-Siddaramaiah