Sunday, August 2, 2026

BDA Apartments

Home Front Page ಡ್ರಗ್ಸ್ ಮಾಫಿಯಾ ವಿಚಾರ: ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ಡ್ರಗ್ಸ್ ಮಾಫಿಯಾ ವಿಚಾರ: ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ…

ಬೆಂಗಳೂರು,ಆಗಸ್ಟ್,31,2020(www.justkannada.in):  ಇತ್ತೀಚೆಗೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ಸ್‌ ಜಾಲದಲ್ಲಿ ಸ್ಯಾಂಡಲ್‌ವುಡ್‌ನ ಕೆಲ ನಟ-ನಟಿಯರು ಮತ್ತು ಸಂಗೀತ ನಿರ್ದೇಶಕರು ಭಾಗಿ ಆಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು ಡ್ರಗ್ಸ್ ಜಾಲದ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

jk-logo-justkannada-logo

ಡ್ರಗ್ಸ್ ದಂಧೆ ತಡೆಯುವ ಸಂಬಂಧ ಚರ್ಚಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದು ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.minister-basavaraj-bommai-meeting-police-officer

ಹಾಗೆಯೇ  ಡ್ರಗ್ಸ್ ಜಾಲದಲ್ಲಿ ಸಿಲುಕಿ ಬಿದ್ದವರ ವಿರುದ್ದ ಐಪಿಸಿಯಡಿ ಪ್ರಕರಣ ದಾಖಲಿಸಲಾಗುತ್ತಿತ್ತು. ಇನ್ಮುಂದೆ ಎನ್ ಡಿಪಿಎಸ್  ಆ್ಯಕ್ಟ್ ನಡಿ ಪ್ರಕರಣ ದಾಖಲಿನ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು ಈ ಬಗ್ಗೆ ಕಾನೂನು ತಜ್ಞರ ಜತೆ ಸಚಿವ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Key words: minister- Basavaraj bommai-meeting-police officer