Wednesday, August 26, 2026

BDA Apartments

Home Front Page ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಅಚ್ಚರಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ...

ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಅಚ್ಚರಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ….

ಬೆಂಗಳೂರು,ಮೇ,2,2019(www.justkannada.in):  ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡ ನೀಡಿದ್ದ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಜಿಟಿ ದೇವೇಗೌಡ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,  ಸಚಿವ ಜಿಟಿ ದೇವೇಗೌಡ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತು ಸುಳ್ಳಾಗಲಿ  ಎಂದು ಆಶಿಸುತ್ತೇನೆ  ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದುವರಿದು ಹೇಳಿಕೆ ನೀಡಿರುವ ಅವರು, ಮೇ 23ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯ ಸತ್ಯತೆ ಗೊತ್ತಾಗಲಿದೆ. ಮಿಂಚಿಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ.  ಕಾದು ನೋಡೋಣ ಎಂದು ಸಮನ್ವಯ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು  ಬಿಜೆಪಿಗೆ  ಮತಹಾಕಿದ್ದಾರೆ. ಉದ್ಬೂರು ಸೇರಿ ಕೆಲವು ಕಡೆ ಹೀಗಾಗಿದೆ ಎಂದು ಸಚಿವ ಜಿ.ಟಿ ದೇವೇಗೌಡರು ನಿನ್ನೆ ಹೇಳಿಕೆ ನೀಡಿದ್ದರು. ಇದು ಮೈತ್ರಿ ಸರ್ಕಾರದಲ್ಲಿ ಸಾಕಷ್ಟು ಗೊಂದಲಕ್ಕೀಡು ಮಾಡಿತ್ತು.

Key words: Former CM Siddaramaiah- gave -surprise -response -Twitter -statement -minister GT Deve Gowda.