Sunday, August 23, 2026

BDA Apartments

Home Front Page ಪಂಚಭೂತಗಳಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಲೀನ

ಪಂಚಭೂತಗಳಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಲೀನ

ನವದೆಹಲಿ, ಸೆಪ್ಟೆಂಬರ್ 01, 2020 (www.justkannada.in): ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಇಂದು ಲೋಧಿ ಚಿತಾಗಾರದಲ್ಲಿ ನಡೆಯಿತು.

ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅವರು ಅಂತಿಮ ವಿಧಿ, ವಿಧಾನ ನೆರವೇರಿಸಿದ್ದರು, ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಇಂದು ಬೆಳಗ್ಗೆ ಪ್ರಣಬ್ ಪಾರ್ಥಿವ ಶರೀರರವನ್ನು ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಇರಿಸಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದರು. ಕೋವಿಡ್ 19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ನಿಯಮಾವಳಿಯನ್ನು ಪಾಲಿಸಲಾಗಿತ್ತು.