Thursday, August 6, 2026

BDA Apartments

Home Front Page ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆ ಜಾರಿ : ಸಚಿವ ಎಸ್.ಟಿ.ಸೋಮಶೇಖರ್ ಭರವಸೆ

ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆ ಜಾರಿ : ಸಚಿವ ಎಸ್.ಟಿ.ಸೋಮಶೇಖರ್ ಭರವಸೆ

ಮೈಸೂರು, ಸೆಪ್ಟೆಂಬರ್,05, 2020(www.justkannada.in) ; ಜಾನುವಾರುಗಳಿಗೆ ತೊಂದರೆಯಾದಲ್ಲಿ 1962 ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣವೇ ವಾಹನವು ವೈದ್ಯರೊಂದಿಗೆ ಮಾಲೀಕನ ಮನೆಗೆ ತೆರಳಿ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವುದು. ಹೀಗಾಗಿ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆಯು ಜಾರಿಯಾಗಲಿದೆ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಭರವಸೆ ನೀಡಿದರು.

jk-logo-justkannada-logo

ಶನಿವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಎಸ್.ಟಿ.ಸೋಮಶೇಖರ್ ಅವರು ಪಶು ಚಿಕಿತ್ಸಾ, ಪಶು ಸಂಜೀವಿನಿ ವಾಹನವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಪಶು ಸಂಜೀವಿನಿ ವಾಹನವನ್ನು ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಲೋಕರ್ಪಣೆ ಮಾಡುವರು. ಮೈಸೂರಿನಲ್ಲಿಂದು ಲೋಕರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆಯು ಜಾರಿಯಾಗಲಿದೆ ಎಂದರು.

ಪಶು ಸಂಜೀವಿನಿ ವಾಹನದಿಂದ ಜಾನುವಾರುಗಳ ಮಾಲೀಕರಿಗೆ ಅನುಕೂಲವಾಗಲಿದೆ. ಪಶು ಸಂಜೀವಿನಿ ವಾಹನದಲ್ಲಿ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ, 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್, ಹವಾನಿಯಂತ್ರಣ ವ್ಯವಸ್ಥೆ, ಪಶು ವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನ ಹಾಗೂ ಆಧುನಿಕ ಪಶು ವೈದ್ಯಕೀಯ ಸೇವೆಗಳನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

statewide-veterinary-sanctuary-Vehicle-system-enforcement-Minister-S.T.Somashekhar-assured

ಸೆಪ್ಟೆಂಬರ್ 8ರಂದು ದಸರಾ ಉನ್ನತ ಮಟ್ಟದ ಸಮಿತಿ ಸಭೆ

ದಸರಾ ಆಚರಣೆ ಬಗ್ಗೆ ಸೆಪ್ಟೆಂಬರ್ 8 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲಾಗುವುದು. ನಂತರ ಮೈಸೂರಿನಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಇಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇರೆಗೆ ದಸರಾವನ್ನು ಆಚರಿಸಲಾಗುವುದು ಎಂದು ಹೇಳಿದರು.

ಡ್ರಗ್ಸ್ ದಂಧೆ ಯಾರೆ ಭಾಗಿಯಾಗಿದ್ದರು ಕಠಿಣ ಕ್ರಮ..

ಡ್ರಗ್ಸ್ ದಂಧೆಯಲ್ಲಿ ನಂಟು ಹೊಂದಿರುವ ರಾಜಕೀಯದವರಾಗಲಿ, ಸಿನಿಮಾ ನಟರಾಗಲಿ, ಉದ್ಯಮಿಗಳ ಮಕ್ಕಳಾಗಲಿ, ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಒಂದುವೇಳೆ ಮೈಸೂರು ನಗರದಲ್ಲಿ ಗಾಂಜಾ ಮಾರಾಟವು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪರಿಮಳ ಶ್ಯಾಂ, ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಿ.ಶರತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮುಡಾ ಅಧ್ಯಕ್ಷ ಎಚ್.ವಿ ರಾಜೀವ್ ಇತರರು ಉಪಸ್ಥಿತರಿದ್ದರು.

key words : statewide-veterinary-sanctuary-Vehicle-system-enforcement-
Minister-S.T.Somashekhar-assured