Saturday, September 19, 2026

BDA Apartments

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂ...
Home Front Page  ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ….

 ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ….

ಬೆಂಗಳೂರು, ಜೂ,10,2019(www.justkannada.in):   ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಅವರು  ಇತಿಹಾಸ, ಪುರಾಣ ಕಥೆಗಳನ್ನು  ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಮರಿಸಿದ್ದಾರೆ.

ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ  ಎಂದು  ಸಿಎಂ ಹೆಚ್.ಡಿ ಕುಮಾರಸ್ವಾಮಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Key words: CM HD Kumaraswamy condoled the death of senior writer Girish Karnad.

#CMHDKumaraswamy #condoled #death #seniorwriter #GirishKarnad.