Wednesday, October 28, 2026

Dasara Wishes

Happy Dasara
Home Front Page ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ…

ಮೈಸೂರು,ಸೆಪ್ಟಂಬರ್,15,2020(www.justkannada.in): ಸೇವಾ ಭದ್ರತೆ ಮತ್ತು ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು  ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.jk-logo-justkannada-logo

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಮತ್ತು ಖಾಯಂ ನೇಮಕಾತಿ ಸೇರಿದಂತೆ ವಿವಿಧ  ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಲಾಕ್ ಡೌನ್ ಅವಧಿಯ ಗೌರವಧನವನ್ನು ನೀಡಬೇಕು. ಪಿಎಫ್ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.various-demand-fulfilment-continued-guest-lecturers-protest-mysore

ಅತಿಥಿ ಉಪನ್ಯಾಸಕರು ಕಳೆದ 10 ವಾರಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Key words: Various -demand – fulfilment-Continued -guest lecturers -protest -Mysore.