Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ  ಕೊರೋನಾ ಪಾಸಿಟಿವ್

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ  ಕೊರೋನಾ ಪಾಸಿಟಿವ್

ಬೆಂಗಳೂರು, ಸೆಪ್ಟೆಂಬರ್,16,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಈ ನಡುವೆ ಇತ್ತೀಚೆಗೆ ರಾಜಕಾರಣಿಗಳು ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಮಧ್ಯೆ  ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಸೋಂಕು  ದೃಢಪಟ್ಟಿದೆ.jk-logo-justkannada-logo

ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. “ನನಗೂ ಸಹ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.corona-positive-home-minister-basavaraja-bommai

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಮನೆ ಕೆಲಸದ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆ ಸಚಿವ ಬಸವರಾಜ ಬೊಮ್ಮಾಯಿ ಕೊರೋನಾ ಟೆಸ್ಟ್ ಮಾಡಿಸಿದ್ದರು. ಇದೀಗ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿಂದೆ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ರಾಜಕೀಯ ಗಣ್ಯರಿಗೆ ಕೋವಿಡ್ ತಗುಲಿತ್ತು. ಅವರು ಕೊರೋನಾದಿಂದ ಗುಣಮುಖರಾಗಿದ್ದಾರೆ.

Key words: Corona Positive – Home Minister -Basavaraja Bommai.