Sunday, October 11, 2026

Dasara Wishes

ಇಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ DasraWishes_JK DasraWishes JK
Happy Dasara
Home Front Page ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಬಿಎಸ್ ವೈ.. 

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಿದ ಸಿಎಂ ಬಿಎಸ್ ವೈ.. 

ನವದೆಹಲಿ,ಸೆಪ್ಟೆಂಬರ್ 17,2020(www.justkannada.in):  ರಾಜ್ಯದ ಸಮಸ್ಯೆಗಳು ಮತ್ತು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ  ಇಂದು ಮಧ್ಯಾಹ್ನ ನವದೆಹಲಿಗೆ  ತೆರಳಿದ್ದಾರೆ.jk-logo-justkannada-logo

ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರ ಗೌಡ ಪಾಟೀಲ್ ಅವರು ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿಮಾಡಿದ  ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಾವು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.CM BS Yeddyurappa- went - Delhi - discuss –cabinet- expansion.

ಎರಡು ದಿನಗಳ ತಮ್ಮ ಭೇಟಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರೂ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದ ಯಡಿಯೂರಪ್ಪ ಅವರು ಪಕ್ಷದ ಗಣ್ಯರೊಂದಿಗೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸುವ ತಮ್ಮ ಇಂಗಿತವನ್ನು ಬಹಿರಂಗಗೊಳಿಸಿದರು.

Key words: CM BS Yeddyurappa- went – Delhi – discuss –cabinet- expansion.