Tuesday, August 18, 2026

BDA Apartments

Home Front Page ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಎಂಗೆ ಬಿಟ್ಟ ವಿಚಾರ-ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಎಂಗೆ ಬಿಟ್ಟ ವಿಚಾರ-ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು,ಸೆಪ್ಟಂಬರ್,18,2020(www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡೋದು ಸಿಎಂಗೆ ಬಿಟ್ಟ ವಿಚಾರ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.jk-logo-justkannada-logo

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್ , ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನ್ನನ್ನು ಕೇಳಬೇಡಿ. ನೀವು ಏನಿದ್ದರೂ ಮುಖ್ಯಮಂತ್ರಿಗಳನ್ನೆ ಕೇಳಬೇಕು. ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡೋದು ಅವರಿಗೆ ಬಿಟ್ಟ ವಿಚಾರ. ಅದನ್ನ ಸಿಎಂ ಅಂತಿಮ ಮಾಡುತ್ತಾರೆ‌ ಎಂದರು.

ನಮ್ಮ‌ ಜೊತೆ  ಬಂದವರನ್ನ ತೆಗೆದುಕೊಳ್ಳಬೇಕು ಬಿಡಬೇಕೂ ಎಂಬುದು ಅವರಿಗೆ ಬಿಟ್ಟ ವಿಚಾರ. ಈ ಬಗ್ಗೆ ನಾವು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಮುಖ್ಯಮಂತ್ರಿಗಳಿಗೆ ಯಾರಿಗೆ ಏನು ನೀಡಬೇಕು ಎಂಬುದು ಗೊತ್ತಿದೆ. ಯಡಿಯೂರಪ್ಪ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ‌ ಎಂದರು.

ರಾಜ್ಯ ಬಿಜೆಪಿಯಲ್ಲಿ  ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಇದೆಲ್ಲಾ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ಬೇರೆಲ್ಲೂ ಇದರ ಬಗ್ಗೆ ಚರ್ಚೆ ಆಗ್ತಿಲ್ಲ. ಅವರನ್ನ ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ನಡೆಯುತ್ತಿಲ್ಲ. ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಎಸ್.ಟಿ ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

Key words: Minister -ST Somashekhar- Mysore –minister position-CM.