Wednesday, October 7, 2026

BDA Apartments

ಒಳ್ಳೆಯತನದ ನಮ್ಮ ವರಾಳೆ ಸಾಹೇಬರು BDA JK_Adv BDA Adv
Home Front Page ವಿಧಾನ ಪರಿಷತ್‍ನಲ್ಲಿ ಎಸ್.ಪಿ.ಬಿಗೆ ಭಾವಪೂರ್ಣ ಶ್ರದ್ಧಾಂಜಲಿ

ವಿಧಾನ ಪರಿಷತ್‍ನಲ್ಲಿ ಎಸ್.ಪಿ.ಬಿಗೆ ಭಾವಪೂರ್ಣ ಶ್ರದ್ಧಾಂಜಲಿ

ಬೆಂಗಳೂರು, ಸೆಪ್ಟೆಂಬರ್ 26, 2020 (www.justkannada.in): ಎಸ್.ಪಿ.ಬಾಲಸುಬ್ರಹ್ಮಣಂ ಅವರ ನಿಧನಕ್ಕೆ ವಿಧಾನ ಪರಿಷತ್‍ನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವರು ಸಂತಾಪ ಸೂಚನೆಯನ್ನು ಮಂಡಿಸಿದರು. ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಬಾಲಸುಬ್ರಹ್ಮಣ್ಯಂ ಅವರು ಹುಟ್ಟು ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಎರಡು ವರ್ಷದ ಹಿಂದೆ ನಮ್ಮೂರಿಗೆ ಬಂದಿದ್ದರು. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದಿದ್ದರು ಎಂದು ಅವರ ಸಾಧನೆಗಳನ್ನು ಕೊಂಡಾಡಿದ್ದರು. ಬಳಿಕ ಸದನದಲ್ಲಿ ಒಂದು ನಿಮಿಷ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.