ನಿರುದ್ಯೋಗ, ಆರ್ಥಿಕ ಕುಸಿತ ಬಗ್ಗೆ ಜಾಗೃತಿ ಮೂಡಿಸಲು ಅ.2 ರಿಂದ ಆನ್ ಲೈನ್ ವೆಬಿನಾರ್ -ಎಸ್.ಆರ್.ಹಿರೇಮಠ್  

ಮೈಸೂರು,ಸೆಪ್ಟಂಬರ್,30,2020(www.justkannada.in): ನಿರುದ್ಯೋಗ, ಆರ್ಥಿಕ ಕುಸಿತ ಸೇರಿ ಹಲವು ವಿಚಾರಗಳ ಬಗ್ಗೆ ಜನ ಜಾಗೃತಿ ಮೂಡಿಸಲು ಅಕ್ಟೋಬರ್ 2 ರಿಂದ ಆನ್ ಲೈನ್ ವೆಬಿನಾರ್ ಮತ್ತು ಸಭೆಯನ್ನು ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್  ಮಾಹಿತಿ ನೀಡಿದರು.jk-logo-justkannada-logo

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್. ಆರ್ ಹಿರೇಮಠ್, ಅಕ್ಟೋಬರ್ 2ರ ಗಾಂಧಿ ಜಯಂತಿಯಿಂದ ಅ.11ರ ಜಯಪ್ರಕಾಶ್ ನಾರಾಯಣ್ ಜಯಂತಿವರೆಗೆ ಆನ್ ಲೈನ್ ವೆಬಿನಾರ್ ಮತ್ತು ಸಭೆ ಆಯೋಜಿಸಲಾಗಿದೆ. ನಿರುದ್ಯೋಗ, ಆರ್ಥಿಕ ಕುಸಿತ, ಪ್ರಜಾಪ್ರಭುತ್ವದ ಮೇಲಿನ ಹಲ್ಲೆ, ವಿಧ್ವಂಸಕ ಭೂ ತಿದ್ದುಪಡಿ ಸೇರಿ ಹಲವು ವಿಚಾರಗಳ ಬಗ್ಗೆ ಜನಜಾಗೃತಿ ಮೂಡಿಸಲು ಜನಾಂದೋಲನ ಮಹಾಮೈತ್ರಿ ಮತ್ತು ಜನತಂತ್ರ ಪ್ರಯೋಗ ಶಾಲಾ ಸಂಸ್ಥೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 2ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾಹಿತಿ ದೇವನೂರು ಮಹದೇವ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ನಿರುದ್ಯೋಗ ಸಮಸ್ಯೆಗೆ ಮೂಲ ಕಾರಣ ಮತ್ತು ಪರಿಹಾರ ಹಾಗೂ ವಲಸೆ ಕಾರ್ಮಿಕರು ಮತ್ತು ನರೇಗ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕುರಿತು ಉಪನ್ಯಾಸ ನಡೆಯಲಿದೆ ಎಂದು ಮಾಹಿತಿ ನೀಡಿದರು.mysore-online-webinar-october2-unemployment-sr-hiremath

ಮಾಧ್ಯಮಗಳಿಗೆ ಕಡಿವಾಣ ಹಾಕಿ ಹತ್ತಿಕ್ಕುವ ಕೆಲಸ ಮಾಡುತ್ತಿರುವುದು ಖಂಡನೀಯ…

ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ ಎಸ್.ಆರ್ ಹಿರೇಮಠ್,  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಜ್ಜೆಗೆಟ್ಟ ಸರ್ಕಾರಗಳು. ಸಿಎಎ, ಎನ್ ಆರ್ ಸಿ, ಮತ್ತು ಭೂ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದು ಪ್ರಜಾಪ್ರಭುತ್ವವನ್ನು ಹರಣ ಮಾಡುತ್ತಿವೆ. ಇದೀಗ ಮಾಧ್ಯಮಗಳಿಗೆ ಕಡಿವಾಣ ಹಾಕಿ ಹತ್ತಿಕ್ಕುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

Key words: mysore-Online -webinar –october2- unemployment -SR Hiremath