Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಮೈತ್ರಿ ವಿಚಾರ: ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…

ಮೈತ್ರಿ ವಿಚಾರ: ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…

ಬೆಂಗಳೂರು, ಅಕ್ಟೋಬರ್,1,2020( www.justkannada.in):  ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಕಣ ರಂಗೇರಿದ್ದು ಈ ನಡುವೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.jk-logo-justkannada-logo

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ…

ಹಾಗೆಯೇ ಇನ್ನೊಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಗೆ ಕುಟುಕಿರುವ ಹೆಚ್.ಡಿಕೆ,  ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಹರಿಹಾಯ್ದಿದ್ದಾರೆ.former-cm-hd-kumaraswamy-twitter-against-congress-alliance

ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕರು ಲಾಭ ಮಾಡಿಕೊಳ್ಳುವುದೂ ಬೇಡ‌…

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಗೆ ಚಾಟಿ ಬೀಸಿದ್ದಾರೆ.

Key words: Former CM -HD Kumaraswamy Twitter –against- Congress-alliance