Tuesday, September 29, 2026

BDA Apartments

ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ… BDA JK_Adv BDA Adv
Home Front Page ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ…

ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ…

ತುಮಕೂರು, ಅಕ್ಟೋಬರ್ 14,2020(www.justkannada.in):    ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ನಾಮಪತ್ರವನ್ನು ಸಲ್ಲಿಸಿದರು.jk-logo-justkannada-logo

ನವೆಂಬರ್ 3ರಂದು ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು  10ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದರು. ಈ ವೇಳೆ ರಾಜೇಶ್ ಗೌಡರಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ನಗರಾಧ್ಯಕ್ಷರಾದ ವಿಜಯ ರಾಜ್  ಸಾಥ್ ನೀಡಿದರು.Shira -by-election-Nomination - BJP candidate -Rajesh gowda

ಶಿರಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ನಿಂದ ಟಿ. ಬಿ. ಜಯಚಂದ್ರ, ಜೆಡಿಎಸ್‌ನಿಂದ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ. ಇಬ್ಬರೂ ಸಹ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಶಿರಾ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಜೆಡಿಎಸ್‌ ನಿಂದ ಗೆಲುವು ಸಾಧಿಸಿದ್ದ ಬಿ. ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನರಾಗಿದ್ದು ಹೀಗಾಗಿ ಉಪಚುನಾವಣೆ ನಡೆಯುತ್ತಿದೆ.

Key words:  Shira -by-election-Nomination – BJP candidate -Rajesh gowda