Thursday, August 6, 2026

BDA Apartments

Home Front Page ‘ಕೈ’ ಕಾರ್ಯಕರ್ತರ ಮೇಲೆ  ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರಿಂದ ಹಲ್ಲೆ ಆರೋಪ: ಪೊಲೀಸ್ ಠಾಣೆ ಎದುರು...

‘ಕೈ’ ಕಾರ್ಯಕರ್ತರ ಮೇಲೆ  ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರಿಂದ ಹಲ್ಲೆ ಆರೋಪ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಪ್ರತಿಭಟನೆ…

ಬೆಂಗಳೂರು,ಅಕ್ಟೋಬರ್,21,2020(www.justkannada.in):   ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್  ಮತ್ತು 30ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿ ಇಂದು ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ  ನಡೆಸಿದರು.bjp-candidate-muniranta-supporter-attack-congress-protests

ಕಾಂಗ್ರೆಸ್ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್ ನೇತೃತ್ವದಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಬಿಜೆಪಿ ಅಭ್ಯರ್ಥಿ ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.

ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ  ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ .

ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಹರಿದು ಹಾಕಿದ್ದಾರೆ. ನಂತರ ಮಾಜಿ ಸಂಸದರಾದ ಧೃವನಾರಯಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರ ಕಾರ್ಯದ ಬಳಿ ತೆರಳಿ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.bjp-candidate-muniranta-supporter-attack-congress-protests

ಪ್ರತಿಭಟನೆ ವೇಳೆ ಹಿರಿಯ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಮತ್ತು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Key words: BJP candidate –Muniranta-supporter- attack -Congress -protests