Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Front Page ಬೆಂಗಳೂರು ಮಳೆ ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ- ಸಿಎಂ ಬಿಎಸ್ ಯಡಿಯೂರಪ್ಪ...

ಬೆಂಗಳೂರು ಮಳೆ ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ- ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ…

ಬೆಂಗಳೂರು, ಅಕ್ಟೋಬರ್,24,2020(www.justkannada.in): ಭಾರಿ ಮಳೆಯಿಂದಾಗಿ ರಾಜ್ಯರಾಜಧಾನಿ ಬೆಂಗಳೂರು ತತ್ತರಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.jk-logo-justkannada-logo

ಬೆಂಗಳೂರಿನಲ್ಲಿ ವರುಣನ ಅವಾಂತರದಿಂದ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಈ ಹಿನ್ನೆಲೆ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25 ಸಾವಿರ ರೂ ಪರಿಹಾರ ನೀಡುತ್ತೇವೆ.  ಚೆಕ್ ಮೂಲಕ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ಮಳೆಹಾನಿ ಪ್ರದೇಶಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲು ಮುಂದಾಗಿದ್ದಾರೆ. ಇದಕ್ಕೂ ಮುನ್ನ ಬಿಬಿಎಂಪಿ ಅಧಿಕಾರಿಗಳ ಜತೆ ಸಿಎಂ ಬಿಎಸ್ ವೈ ಸಭೆ ನಡೆಸಿ ಮಳೆಹಾನಿ ಬಗ್ಗೆ ಮಾಹಿತಿ ಪಡೆದರು.

Key words: 25,000 compensation – Bangalore- rain-damaged –family-CM BS Yeddyurappa- Announcement