Friday, September 18, 2026

BDA Apartments

ದೇಶದಲ್ಲಿ ಒಂದೇ ದಿನ 36,469 ಜನರಲ್ಲಿ ಕೊರೋನಾ ಸೋಂಕು ಪತ್ತೆ… BDA JK_Adv BDA Adv
Home Front Page ದೇಶದಲ್ಲಿ ಒಂದೇ ದಿನ 36,469 ಜನರಲ್ಲಿ ಕೊರೋನಾ ಸೋಂಕು ಪತ್ತೆ…

ದೇಶದಲ್ಲಿ ಒಂದೇ ದಿನ 36,469 ಜನರಲ್ಲಿ ಕೊರೋನಾ ಸೋಂಕು ಪತ್ತೆ…

 

 ನವದೆಹಲಿ,ಅಕ್ಟೋಬರ್,27,2020(www.justkannada.in):   ದೇಶದಲ್ಲಿ ದಿನನಿತ್ಯ ಕೊರೋನಾ ಸೋಂಕಿಗೆ ತುತ್ತಾಗುವವರ ಸಂಖ್ಯೆ ಇಳಿಮುಖವಾಗುತ್ತಿದ್ದು  ಕಳೆದ 24 ಗಂಟೆಯಲ್ಲಿ 36,469 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ  ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿಗೆ 488 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,19,502ಕ್ಕೆ ಏರಿಕೆಯಾಗಿದೆ.coronavirus-detected-36469-people-single-day-country

ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 63,842 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ದೇಶದಲ್ಲಿ 6,25,857 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಈವರೆಗೆ ದೇಶದಲ್ಲಿ 72,01,070 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Key words: Coronavirus – detected -36,469 people – single day – country.