Sunday, September 20, 2026

BDA Apartments

ಕಂಗನಾಗೆ ಮತ್ತೆ ಸಂಕಷ್ಟ ತಂದೊಡ್ಡಿದ ಗೀತ ರಚನೆಕಾರ BDA JK_Adv BDA Adv
Home Cinema ಕಂಗನಾಗೆ ಮತ್ತೆ ಸಂಕಷ್ಟ ತಂದೊಡ್ಡಿದ ಗೀತ ರಚನೆಕಾರ

ಕಂಗನಾಗೆ ಮತ್ತೆ ಸಂಕಷ್ಟ ತಂದೊಡ್ಡಿದ ಗೀತ ರಚನೆಕಾರ

ಮುಂಬೈ, ನವೆಂಬರ್,4, 2020: ನಟಿ ಕಂಗನಾ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಾಗಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಕವಿ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಗನಾ ರನೌತ್ ನನ್ನ ಪ್ರತಿಷ್ಠೆಗೆ ಹಾನಿ ಉಂಟು ಮಾಡಿದ್ದಾರೆ, ಆಧಾರರಹಿತ ಕಾಮೆಂಟ್ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್ ದೂರಿನಲ್ಲಿ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಮಾತನಾಡುವಾಗ ಬಾಲಿವುಡ್‌ನಲ್ಲಿ ಗುಂಪುಗಾರಿಕೆ‌ಯನ್ನು ಉಲ್ಲೇಖಿಸಿ ಕಂಗನಾ ತಮ್ಮ ಹೆಸರನ್ನು ಎಳೆದು ತಂದಿದ್ದಾರೆ ಎಂದು ದೂರಿದ್ದಾರೆ.