Saturday, August 8, 2026

BDA Apartments

Home Front Page ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್…

ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್…

 ಬೆಂಗಳೂರು, ನವೆಂಬರ್,4,2020(www.justkannada.in):  ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಶಾಲೆ ಆರಂಭ ವಿಚಾರ ಕುರಿತು ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಚಿವ ಸುರೇಶ್ ಕುಮಾರ್ ಮಹತ್ವದ ಸಭೆ ನಡೆಸಿ ಚರ್ಚಿಸಿದರು. ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಗ್ಗೆ ಇನ್ನು ಎರಡು ದಿನಗಳ ಕಾಲ ಚರ್ಚಿಸಲಾಗುವುದು. ಎಲ್ಲಾ ರಾಜ್ಯಗಳಲ್ಲಿ ಶಾಲಾ ಆರಂಭದ ಸ್ಥಿತಿ ಗತಿ  ಬಗ್ಗೆ ಅವಲೋಕನ ಮಾಡುತ್ತೇವೆ. ನಂತರ ಎಲ್ಲದರ ಬಗ್ಗೆ ಸಿಎಂಗೆ ವರದಿ ಸಲ್ಲಿಸಿ ಮನವರಿಕೆ ಮಾಡಿತ್ತೇವೆ. ನಂತರ ಮುಂದೆ ಏನು ಮಾಡಬೇಕೋ ನಿರ್ಧರಿಸುತ್ತೇವೆ ಎಂದರು.education-minister-suresh-kumar-clarified-start-school-state

ಇಂದು ಎರಡು ವಿಚಾರಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಶಾಲೆಗಳ ಆರಂಭ ವಿಚಾರವಾಗಿ ಸಭೆ ನಡೆಸಿ ಚರ್ಚಿಸಿದ್ದೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯವನ್ನು ನಾವು ಸಂಗ್ರಹಿಸಿದ್ದೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

Key words: Education Minister- Suresh Kumar -clarified – start -school – state.