Friday, August 14, 2026

BDA Apartments

Home Cinema ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಚೆನ್ನೈ, ಜೂನ್ 17, 2019 (www.justkannada.in): ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನೇಕ ವರ್ಷಗಳಿಂದ ಹೃದಯ ಸಂಬಂದಿ ಸಮಸ್ಯೆಯಿಂದ ಬಳಳುತ್ತಿದ್ದ ಮಣಿರತ್ನಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಢೀರನೆ ಎದೆ ನೋವು ಕಾಣಿಸಿಕೊಂಡ ಕಾರಣ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಣಿರತ್ನಂ ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು 2004ರಲ್ಲಿ ‘ಯುವ’ ಚಿತ್ರದ ಚಿತ್ರೀಕರಣ ವೇಳೆ ಹೃದಯಘಾತದಿಂದ ಮೊದಲ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು.