Tuesday, August 25, 2026

BDA Apartments

Home Front Page ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಅಧ್ಯಯನ ವರದಿ ಬಂದ ಬಳಿಕ ಕ್ರಮ-ಸಚಿವ ಡಾ.ಕೆ.ಸುಧಾಕರ್

ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಅಧ್ಯಯನ ವರದಿ ಬಂದ ಬಳಿಕ ಕ್ರಮ-ಸಚಿವ ಡಾ.ಕೆ.ಸುಧಾಕರ್

ಮೈಸೂರು, ನವೆಂಬರ್ 11,2020(www.justkannada.in): ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.kannada-journalist-media-fourth-estate-under-loss

ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಪರಿಶೀಲನೆ ನಡೆಸಿದ ಬಳಿ ಮಾತನಾಡಿದ ಅವರು, “ಇದು 58 ವರ್ಷದಷ್ಟು ಹಳೆ ಕಟ್ಟಡವಾಗಿದ್ದು, ವಿದ್ಯಾರ್ಥಿಗಳು ಶೋಚನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ದುಃಖವಾಗಿದೆ. ಇದನ್ನು ನವೀಕರಿಸಬೇಕೆ ಅಥವಾ ಹೊಸ ಕಟ್ಟಡ ನಿರ್ಮಿಸಬೇಕೆ ಎನ್ನುವ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳಲಾಗುವುದು” ಎಂದರು.

“ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ನಿಧಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನದಿಂದ ಕಟ್ಟಡ ಪುನರ್ ನಿರ್ಮಾಣ ಅಥವಾ ದುರಸ್ತಿ ಮಾಡಲಾಗುವುದು. ಹಿಂದಿನ ಸರ್ಕಾರಗಳು ಈ ಬಗ್ಗೆ ಗಮನಹರಿಸಿಲ್ಲ. ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದರು.

ಮೈಸೂರಿನಲ್ಲಿ ಪ್ರಕರಣ ಬಹಳ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯವಿದ್ದರೆ ಮಾತ್ರ ಕೋವಿಡ್ ಕೇರ್ ಸೆಂಟರ್ ಮುಂದುವರಿಸಲಾಗುವುದು. ತಲಕಾಡಿನಲ್ಲಿ ನಡೆಯಲಿರುವ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

Key words: After – report – study – Medical College- Hostel building-Minister – Dr. K. Sudhakar