Thursday, September 17, 2026

BDA Apartments

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್...
Home Cinema ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ನಿಧನ 

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ನಿಧನ 

ಕೊಲ್ಕತ್ತಾ,ನವೆಂಬರ್,15,2020(www.justkannada.in) : ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಅನೇಕ ಪ್ರಶಸ್ತಿಗಳ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ನಿಧನರಾಗಿದ್ದಾರೆ.

kannada-journalist-media-fourth-estate-under-loss

ಕೊಲ್ಕತ್ತಾ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕೊರೋನಾ ಸೇರಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೋವಿಡ್-19 ಪಾಸಿಟಿವ್ ಪರೀಕ್ಷೆ ವರದಿ ಬಂದ ನಂತರ ಅಕ್ಟೋಬರ್ 6 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳ ನಂತರವೂ ಚೇತರಿಸಿಕೊಳ್ಳದ ಅವರು ಭಾನುವಾರ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಸೌಮಿತ್ರ ಚಟರ್ಜಿ ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ. ನರ ಸಂಬಂಧಿ ಕಾಯಿಲೆ ಸೇರಿದಂತೆ ಅನೇಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನಂತರವೂ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅವರು ಇಂದು 12.15 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಭಾರವಾದ ಹೃದಯದಿಂದ ಘೋಷಿಸುತ್ತೇವೆ ಎಂದು ಆಸ್ಪತ್ರೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

Dada Saheb Phalke-Award-renowned-Bengali- celebrity-Soumitra-Chatterjee-dies

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳಿಗೆ ಚಟರ್ಜಿಯವರು ಭಾಜನರಾಗಿದ್ದಾರೆ. 2018ರಲ್ಲಿ ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಲೀಜನ್ ಆಫ್ ಆನರ್ ಕೂಡ ಲಭಿಸಿತ್ತು.

key words : Dada Saheb Phalke-Award-renowned-Bengali- celebrity-Soumitra-Chatterjee-dies