Wednesday, September 30, 2026

BDA Apartments

Home Front Page ಆನ್‌ಲೈನ್ ಗೇಮಿಂಗ್ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿ : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್...

ಆನ್‌ಲೈನ್ ಗೇಮಿಂಗ್ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿ : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು,ನವೆಂಬರ್,16,2020(www.justkannada.in)  : ರಮ್ಮಿ,ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿದ್ದು, ಈ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ರಾಜ್ಯ ಸರ್ಕಾರ ರಮ್ಮಿ ಸೇರಿದಂತೆ ಆನ್ ಲೈನ್ ಗೇಮ್ ಗಳಿಗೆ ಕಡಿವಾಣ ಹಾಕಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

kannada-journalist-media-fourth-estate-under-loss

ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ರಮ್ಮಿ,ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ನಾನೂ ಕೂಡ ಹಲವು ಯುವಕರು ಈ ಆನ್‌ಲೈನ್ ಜೂಜಿನಲ್ಲಿ ವ್ಯಸ್ತರಾಗಿರುವುದನ್ನು‌ ಗಮನಿಸಿದ್ದೇನೆ. ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ. ಹಾಗಾಗಿ, ಇಂತಹ ಗೇಮ್‌ಗಳ ಮೇಲೆ ಕಡಿವಾಣ ಬೀಳಬೇಕು ಎಂದು ಒತ್ತಾಯಿಸಿದ್ದಾರೆ.

Online-Gambling-Addiction-Many-young-people-die-Former-KPCC-president-Dinesh Gundurao 

ಬಾಜಿ ಕಟ್ಟಿ ಆಡುವುದು ಜೂಜು ಎಂಬುದು ನಿರ್ವಿವಾದ

ಆನ್ಲೈನ್ ಆಟ ‘game of skill-not a game of luck’ ಎಂಬ ಆಧಾರದ ಮೇಲೆ ಕಾನೂನಿನ ಮಾನ್ಯತೆ ಪಡೆದುಕೊಂಡಿದೆ. ನಾನು ಈ ವಾದ ಒಪ್ಪುವುದಿಲ್ಲ. ನನ್ನ ಪ್ರಕಾರ ಹಣವನ್ನು ಬಾಜಿ ಕಟ್ಟಿ ಆಡುವುದು ಜೂಜು ಎಂಬುದು ನಿರ್ವಿವಾದ. ಇಂತಹ ಜೂಜಿಗೆ ವಿಶೇಷವಾಗಿ ಯುವಕರು ಆಕರ್ಷಿತರಾಗಿರುವುದು ದುರಂತ. ಸರ್ಕಾರ ಈ ಮನೆಹಾಳು ಗೇಮಿಂಗ್‌ಗಳ ಮೇಲೆ ನಿಷೇಧ ಹೇರಲಿ ಎಂದು ಆಗ್ರಹಿಸಿದ್ದಾರೆ.

Online-Gambling-Addiction-Many-young-people-die-Former-KPCC-president-Dinesh Gundurao 

key words : Online-Gambling-Addiction-Many-young-people-die-Former-KPCC-president-Dinesh Gundurao