ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಿ : ಸಿಎಂ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಪತ್ರ

ಬೆಂಗಳೂರು,ನವೆಂಬರ್,16,2020(www.justkannada.in) :  ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.kannada-journalist-media-fourth-estate-under-lossಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಮಾದರಿ ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿ ನೀಡಿ

ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ, ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್‍ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಭಿವೃದ್ಧಿ ನಿಗಮ ಸ್ಥಾಪನೆಯಿಂದ ಪ್ರಯೋಜನವಿಲ್ಲ

ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನವಾಗುವುದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಲು ಈ ಮೂಲಕ ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

16 percent-reservation-Lingayats-Letter-former-Minister M.B.Patel

key words : 16 percent-reservation-Lingayats-Letter-former-Minister M.B.Patel