Saturday, September 26, 2026

BDA Apartments

ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭ : ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್ BDA JK_Adv BDA Adv
Home Cinema ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭ : ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್

ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭ : ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್

ಚೆನ್ನೈ,ಡಿಸೆಂಬರ್,03,2020(www.justkannada.in) : ಸೂಪರ್ ಸ್ಟಾರ್ ರಜನಿಕಾಂತ್ ಮುಂದಿನ ವರ್ಷ ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭಿಸಲಿದ್ದು, ಡಿಸೆಂಬರ್ 31ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

logo-justkannada-mysore

ಇಷ್ಟು ದಿನಗಳ ಊಹಾಪೋಹ, ಕಾಯುವಿಕೆಗೆ ಕೊನೆಗೂ ಸೂಪರ್ ಸ್ಟಾರ್ ರಜನಿಕಾಂತ್ ತೆರೆ ಎಳೆದಿದ್ದಾರೆ. ಇಂದು ಟ್ವೀಟ್ ಮೂಲಕ ಈ ವಿಷಯ ಪ್ರಕಟಿಸಿರುವ ರಜನಿಕಾಂತ್, ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ.

ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Political-party-start-January-Superstar-Rajinikanth-tweeted

ಮುಂದಿನ ವರ್ಷ ತಮಿಳು ನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನರ ಬೆಂಬಲದೊಂದಿಗೆ ಪ್ರಾಮಾಣಿಕ, ಪಾರದರ್ಶಕ, ಭ್ರಷ್ಟಾಚಾರ ರಹಿತ, ಜಾತ್ಯತೀತ ರಾಜಕೀಯ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಆಶಯವ್ಯಕ್ತಪಡಿಸಿದ್ದಾರೆ.

key words : Political-party-start-January-Superstar-Rajinikanth-tweeted