Friday, September 18, 2026

BDA Apartments

ಬಾಲಕಿ ಮೇಲೆ ಅತ್ಯಾಚಾರ: ಬಾಲಕನ ವಿರುದ್ಧ ಫೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲು B...
Home Crime ಬಾಲಕಿ ಮೇಲೆ ಅತ್ಯಾಚಾರ: ಬಾಲಕನ ವಿರುದ್ಧ ಫೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲು

ಬಾಲಕಿ ಮೇಲೆ ಅತ್ಯಾಚಾರ: ಬಾಲಕನ ವಿರುದ್ಧ ಫೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲು

ಶಿವಮೊಗ್ಗ, ಡಿಸೆಂಬರ್,10,2020(www.justkannada.in) : ಸಾಗರದಲ್ಲಿ 8 ವರ್ಷದ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಮಾಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

logo-justkannada-mysore

ಬಾಲಕಿಯ ತಂದೆ-ತಾಯಿ ಕೂಲಿ ಕಾರ್ಮಿಕರು. ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಟರೆ ಮತ್ತೆ ಮನೆಗೆ ಬರುವುದು ಸಂಜೆಯಾಗುತ್ತದೆ. ಮನೆಯಲ್ಲಿ ಬಾಲಕಿ ಮತ್ತು ಹಾಗೂ ಆಕೆಯ ಅಣ್ಣ ಇಬ್ಬರೇ ಇರುತ್ತಿದ್ದರು.

ಬಾಲಕಿಯ ಅಣ್ಣನಿಗೆ ಸೈಕಲ್ ಕೊಟ್ಟು ಆತನನ್ನು ಬಾಲಕ ಹೊರಗೆ ಕಳುಹಿಸುತ್ತಿದ್ದ. ಕೆಲ ದಿನಗಳಿಂದ ಮೂರು ನಾಲ್ಕು ಬಾರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ, ಈ ವಿಷಯ ಬಹಿರಂಗವಾಗಿರಲಿಲ್ಲ ಎಂದು ತಿಳಿದು ಬಂದಿದೆ.

ಸೋಮವಾರ ಕೂಡ ಬಾಲಕಿಯ ಮೇಲೆ ಬಾಲಕ ಅತ್ಯಾಚಾರ ಎಸಗಿದ್ದ. ಆ ದಿನ ಸಂಜೆ ಪಾಲಕರು ಮನೆಗೆ ಬಂದಾಗ ಬಾಲಕಿ ನೋವಿನಿಂದ ಬಳಲುತ್ತಿದ್ದಳು. ಈ ವೇಳೆ ಬಾಲಕಿ ತನಗಾದ ಕಹಿ ಅನುಭವದ ಬಗ್ಗೆ ಹೇಳಿಕೊಂಡಿದ್ದಾಳೆ. ಬಳಿಕ ಪೋಷಕರು ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಾಲಕಿ ಮೇಲೆ ಅತ್ಯಾಚಾರ ಮಾಡಿರುವವನ ವಿರುದ್ಧ ಕಠಿಣ ಕ್ರಮಕ್ಕೆ ಕುಟುಂಬಸ್ಥರು ಮತ್ತು ಸ್ಥಳೀಯರು ಒತ್ತಾಯಿಸಿದ್ದಾರೆ.

key words : Rape-girl-Foxo-against-boy-Act-case-registration