Monday, August 17, 2026

BDA Apartments

Home Front Page ಸಾರಿಗೆ ನೌಕರರ ಮುಷ್ಕರಕ್ಕೆ ಅಸಮಾಧಾನ: ಸರ್ಕಾರದ ಪರ ಬ್ಯಾಟ್ ಬೀಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಸಾರಿಗೆ ನೌಕರರ ಮುಷ್ಕರಕ್ಕೆ ಅಸಮಾಧಾನ: ಸರ್ಕಾರದ ಪರ ಬ್ಯಾಟ್ ಬೀಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಡಿಸೆಂಬರ್,12,2020(www.justkannada.in):  ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.logo-justkannada-mysore

ಈ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಿಮ್ಮ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ನಿಮ್ಮ ಬೇಡಿಕೆ ಈಡೇರಿಸುವ ಸಮಯ ಇದಲ್ಲ ಎಂದಿದ್ದಾರೆ.

ಕೊರೋನಾದಿಂದ ಸರ್ಕಾರ ಈಗಾಗಲೇ ಸಂಕಷ್ಟದಲ್ಲಿದೆ.  ಹೀಗಾಗಿ ನಿಮ್ಮ ಬೇಡಿಕೆ ಈಡೇರಿಸುವ ಸಮಯ ಇದಲ್ಲ.  ಸರ್ಕಾರದ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಿ. ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಸರ್ಕಾರದ ಪರ ಹೆಚ್.ಡಿ ಕುಮಾರಸ್ವಾಮಿ ಬ್ಯಾಟ್ ಬೀಸಿದ್ದಾರೆ.

Key words: strike -transport employees-Former CM -HD Kumaraswamy- bat-government.