Saturday, August 15, 2026

BDA Apartments

Home Crime ಮೈಸೂರು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೆಮೇಲೆ ಎಸಿಬಿ ದಾಳಿ

ಮೈಸೂರು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೆಮೇಲೆ ಎಸಿಬಿ ದಾಳಿ

ಮೈಸೂರು,ಡಿಸೆಂಬರ್,18,2020(www.justkannada.in)  : ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರುಗಳು ಆಧಾರದ ಹಿನ್ನಲೆ ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳು 5 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.Teachers,solve,problems,Government,bound,Minister,R.Ashok

ಶುಕ್ರವಾರ ಬೆಳಗ್ಗೆ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಶಂಕರ್ ಅವರ ಮನೆಯಲ್ಲಿ ಶೋಧ ಕಾರ್ಯವನ್ನು ಅಧಿಕಾರಿಗಳು ಮುಂದುವರೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನಲೆಯಲ್ಲಿ ದಾಳಿಯನ್ನು ನಡೆಸಲಾಗಿದೆ.

assistant-Forest-Conservator-Mysore-Forest-Department-attacked-ACB-house

ಮೈಸೂರು ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಮನೆ ಸೇರಿ ಏಕ ಕಾಲದಲ್ಲಿ 5 ಕಡೆ ಶೋಧ ಕಾರ್ಯಾಚರಣೆ ನಡೆದಿದೆ. ನಜರ್ ಬಾದ್, ಸರಸ್ವತಿಪುರಂ, ಜೆ. ಸಿ. ಬಡಾವಣೆ, ಮಳವಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ಮಾಡಲಾಗಿದೆ ಎಂದು ಕೇಳಿ ಬಂದಿದೆ.

key words : assistant-Forest-Conservator-Mysore-Forest-Department-attacked-ACB-house