Saturday, October 24, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ- ಹೆಚ್.ಡಿ ಕುಮಾರಸ್ವಾಮಿ ಟ್ವೀಟ್

ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ- ಹೆಚ್.ಡಿ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು,ಡಿಸೆಂಬರ್,26,2020(www.justkannada.in) : ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.Teachers,solve,problems,Government,bound,Minister,R.Ashok

ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಸಲಹೆ ನೀಡಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್  ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ, ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದಿದ್ದಾರೆ.

ರೈತರ ಪ್ರತಿಭಟನೆ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ

Meeting-country's-dignity-essential-Former-CM-HD Kumaraswamy-said-whom?

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ ಎಂದು ಆತಂಕವ್ಯಕ್ತಪಡಿಸಿದ್ದಾರೆ.

ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ, ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ.

ಮೋದಿ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು

Meeting-country's-dignity-essential-Former-CM-HD Kumaraswamy-said-whom?

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು.

key words : Meeting-country’s-dignity-essential-Former-CM-HD Kumaraswamy-said-whom?