Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಸಂತಾಪ...

ಕೇಂದ್ರದ ಮಾಜಿ ಸಚಿವ ಬೂಟಾ ಸಿಂಗ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಸಂತಾಪ ಸೂಚನೆ…

ಬೆಂಗಳೂರು,ಜನವರಿ,2,2021(www.justkannada.in): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾದ ಬೂಟಾ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.jk-logo-justkannada-mysore

‘ಬೂಟಾ ಸಿಂಗ್ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ಇಂದಿರಾಗಾಂಧಿ ಅವರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಬೂಟಾ ಸಿಂಗ್ ಅವರು ಅನುಭವಿ ರಾಜಕಾರಣಿ. ಬಡವರು ಮತ್ತು ದೀನದಲಿತರ ಧ್ವನಿಯಾಗಿ ಅವರ ಕಲ್ಯಾಣಕ್ಕೆ ಶ್ರಮಿಸಿದ್ದ ಅವರು ಅಪಾರ ಅಭಿಮಾನಿ ಬಳಗ ಹೊಂದಿದ್ದರು. ಜತೆಗೆ ಬಿಹಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಅವರು ಸೇವೆ ಸಲ್ಲಿಸಿದ್ದರು.kpcc-president-dk-shivakumar-condolences-central-former-minister-buta-singh

ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ನುಡಿಯಲ್ಲಿ ತಿಳಿಸಿದ್ದಾರೆ.

Key words: KPCC president DK shivakumar- Condolences central former minister- buta singh