Sunday, August 2, 2026

BDA Apartments

Home Front Page ‘ನನಗೆ ಸೂಟ್ ಆಗತ್ತೆ. ಆದರೆ ನಾನು ಸೂಟ್ ಆಗಲ್ಲ’ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದು ಯಾವುದಕ್ಕೆ...

‘ನನಗೆ ಸೂಟ್ ಆಗತ್ತೆ. ಆದರೆ ನಾನು ಸೂಟ್ ಆಗಲ್ಲ’ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದು ಯಾವುದಕ್ಕೆ ಗೊತ್ತಾ…?

ಮೈಸೂರು,ಜನವರಿ,2,2020(www.justkannada.in): ಇತ್ತೀಚೆಗೆ ಯದುವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೂಹ ಹಬ್ಬಿತ್ತು. ಈ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು.  ಇದೀಗ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಸಹ ತಮ್ಮ ರಾಜಕೀಯ ಪ್ರವೇಶದ ಬಗ್ಗೆ  ಸ್ಪಷ್ಟನೆ ನೀಡಿದ್ದಾರೆ.jk-logo-justkannada-mysore

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪ್ರಮೋದಾದೇವಿ ಒಡೆಯರ್, “ರಾಜಕೀಯ ನನಗೆ ಸೂಟ್ ಆಗತ್ತೆ. ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ. ಈ ಹಿಂದೆಯೂ ಹಲವಾರು ಬಾರಿ ಸ್ಪಷ್ಟನೆ ಕೊಟ್ಟಿದ್ದೇನು.  ಪದೇ ಪದೇ ಅದನ್ನೇ ಹೇಳೋದಿಕ್ಕೆ ಇಷ್ಟ ಇಲ್ಲ.  ಆಡಳಿತ ನಡೆಸುವುದಕ್ಕೆ ನನಗೆ ಕಷ್ಟ ಆಗಲ್ಲ.  ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ. ಹೀಗಾಗಿ ನಾನು ರಾಜಕೀಯಕ್ಕೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Key words: mysore-pramoda devi wodeyar-political-entray-clearify