Friday, August 7, 2026

BDA Apartments

Home Front Page ಕೊರೋನಾ ಲಸಿಕೆ ಹಂಚಿಕೆ ವಿಚಾರ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಸಚಿವ ಜಗದೀಶ್ ಶೆಟ್ಟರ್...

ಕೊರೋನಾ ಲಸಿಕೆ ಹಂಚಿಕೆ ವಿಚಾರ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು ಹೀಗೆ….

ಮೈಸೂರು,ಜನವರಿ,7,2021(www.justkannada.in):  ಕೊರೋನಾ ಲಸಿಕೆ ಹಂಚಿಕೆ ವಿಚಾರ ನನ್ನ ಇಲಾಖೆಗೆ ಸಂಬಂಧಿಸಿಲ್ಲ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.jk-logo-justkannada-mysore

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್ ಕೊರೋನಾ ಲಸಿಕೆ ಹಂಚಿಕೆ ನನ್ನ ಇಲಾಖೆಗೆ ಸಂಬಂಧಿಸಿಲ್ಲ. ಲಸಿಕೆ ಹಂಚಿಕೆಗೆ ಆರೋಗ್ಯ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆರೋಗ್ಯ ಸಚಿವ ಸುಧಾಕರ್ ಅವರ ನೇತೃತ್ವದಲ್ಲಿ ಲಸಿಕೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.Corona Vaccine -Distribution –Issue-Not related -my department- Minister- Jagadish Shettar ..

ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಜಗದೀಶ್ ಶೆಟ್ಟರ್, ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಜತೆ ಚರ್ಚಿಸಿ ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

Key words: Corona Vaccine -Distribution –Issue-Not related -my department- Minister- Jagadish Shettar ..