Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ವಿವಿಧ ಅಭಿವೃದ್ಧಿ ಕಾಮಗಾರಿ : ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ವೀಕ್ಷಣೆ

ವಿವಿಧ ಅಭಿವೃದ್ಧಿ ಕಾಮಗಾರಿ : ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ವೀಕ್ಷಣೆ

ದಾವಣಗೆರೆ,ಜನವರಿ,11,2021(www.justkannada.in) : ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಸಚಿವ ಬಿ.ಎ.ಬಸವರಾಜ ಅವರು ದಾವಣಗೆರೆ ವ್ಯಾಪ್ತಿಯ ಪಾಲಿಕೆ, ಮುಡಾ, ಒಳಚರಂಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿದರು.

ದಾವಣಗೆರೆ ನಗರದ ವ್ಯಾಪ್ತಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಲಿಮಿಟೆಡ್, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ , ಕರ್ನಾಟಕ ನಗರ ಮೂಲಸೌಕರ್ಯ ಹಾಗೂ ಹಣಕಾಸು ಅಭಿವೃದ್ಧಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿಗಳನ್ನು ಸಚಿವರು ಖುದ್ದು ವೀಕ್ಷಣೆ ನಡೆಸಿದರು.

ಬನಶಂಕರಿ ಬಡಾವಣೆಯ ಪಾರ್ಕ್ ನಲ್ಲಿ ನಿರ್ಮಾಣವಾಗುತ್ತಿರುವ ಜಿಮ್ ಪರಿಕರಗಳ ವೀಕ್ಷಣೆ ಜೊತೆಗೆ ವರ್ಕೌಟ್ ಮಾಡುವ ಮೂಲಕ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಸಚಿವ ಬಸವರಾಜ ಗಮನಸೆಳೆದರು.Various-development-works-Urban-development-Minister-B.A.Basavaraja-Observation

ಈ ಸಂದರ್ಭ ಶಾಸಕ ಎಸ್.ಎ.ರವೀಂದ್ರನಾಥ, ಪಾಲಿಕೆ ಮೇಯರ್ ಅಜಯ್ ಕುಮಾರ್, ಆಯುಕ್ತರು, ಪ್ರಾಧಿಕಾರದ ಅಧ್ಯಕ್ಷರು, ಆಯುಕ್ತರು ಸೇರಿದಂತೆ ಹಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

key words : Various-development-works-Urban-development-Minister-B.A.Basavaraja-Observation