Monday, September 28, 2026

BDA Apartments

Home Front Page ಸಿಎಂ ಹೆಚ್.ಡಿಕೆ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪ- ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಸಿಎಂ ಹೆಚ್.ಡಿಕೆ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪ- ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ,ಜೂ,27,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಅಡಚಣೆ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಸಿಎಂ ಗ್ರಾಮ ವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು ನಾವಲ್ಲ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಸಿಎಂ ಗ್ರಾಮವಾಸ್ತವ್ಯ ಮಾಡುವ ಸಮಯ ಇದಲ್ಲ. ರಾಜ್ಯದ ಬರಪರಿಸ್ಥಿತಿ ಬಗ್ಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಮನ ಹರಿಸಲಿ.  ರಾಜ್ಯಾದ್ಯಂತ ಪ್ರವಾಸ ಮಾಡಿ ಸಮಸ್ಯೆಗಳನ್ನ ಅರಿತು ನಂತರ ಗ್ರಾಮವಾಸ್ತವ್ಯ ಮಾಡಲಿ ಎಂದು ಸಲಹೆ ನೀಡಿದರು.

ಲೋಕಸಭೆ  ಚುನಾವಣೆಯ ಸೋಲಿನ ಹತಾಶೆ ಹೆಚ್.ಡಿ ಕುಮಾರಸ್ವಾಮಿಗಿದೆ. ಮಾನ ಮರ್ಯಾದೆ ಇದ್ದಿದ್ದರೇ ಅವರು ರಾಜೀನಾಮೆ ಕೊಟ್ಟು ಹೋಗಬೇಕಿತ್ತು ಎಂದು ಕಿಡಿಕಾರಿದರು.

Key words: CM Hd kumaraswamy-gramavastavya-bs yeddyurappa-shivamogga