Saturday, August 22, 2026

BDA Apartments

Home Front Page ಗಗನಕ್ಕೇರತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ: ಮೋದಿ, ಕೇಂದ್ರದ ವಿರುದ್ಧ ರಾಹುಲ್ ಟೀಕಾಸ್ತ್ರ

ಗಗನಕ್ಕೇರತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ: ಮೋದಿ, ಕೇಂದ್ರದ ವಿರುದ್ಧ ರಾಹುಲ್ ಟೀಕಾಸ್ತ್ರ

ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್, ಪ್ರಧಾನಿ ಮೋದಿ ವಿರುದ್ಧವೂ ಟೀಕೆಗಳ ಸುರಿಮಳೆಗೈದಿದ್ದಾರೆ.

ಕೇಂದ್ರ ಸರ್ಕಾರ ಆರ್ಥಿಕ ಸಮಸ್ಯೆಯನ್ನು ನಿಯಂತ್ರಿಸುವ ಬದಲು ಸರ್ಕಾರ ತೆರಿಗೆ ಸಂಗ್ರಹದಲ್ಲಿ ತೊಡಗಿದೆ ಎಂದು ದೂರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ಸಾಧಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿದ್ದಾರೆ ಟೀಕಿಸಿದ್ದಾರೆ.