Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page “ದೆಹಲಿ ಹಿಂಸಾಚಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ

“ದೆಹಲಿ ಹಿಂಸಾಚಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು,ಜನವರಿ,27,2021(www.justkannada.in) : ದೆಹಲಿ ರೈತ ಹಿಂಸಾಚಾರ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರವ್ಯಕ್ತಪಡಿಸಿದ್ದಾರೆ.jkರೈತರ ಪ್ರತಿಭಟನೆಯನ್ನು ಸೂಕ್ತ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬಹುದಿತ್ತು. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಸಲಹೆ ನೀಡಿದ್ದಾರೆ.

Delhi-Violence-International-level-India-Blacksmith-Former CM-H.D.Kumaraswamyರೈತರ ಹೋರಾಟವನ್ನೇ ತಲೆಕೆಳಗು ಮಾಡುವ ಪ್ರಯತ್ನಗಳು ನಡೆಯದೇ ಇರುತ್ತವೆಯೇ? ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದು ಅನುಮಾನವ್ಯಕ್ತಪಡಿಸಿದ್ದಾರೆ.Delhi-Violence-International-level-India-Blacksmith-Former CM-H.D.Kumaraswamyರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದು ತಿಳಿಸಿದ್ದಾರೆ.

 

key words : Delhi-Violence-International-level-India-Blacksmith-Former CM-H.D.Kumaraswamy