Thursday, August 6, 2026

BDA Apartments

Home Front Page “ಟೊಯೊಟ ಕಾರ್ಖಾನೆ ಸಮಸ್ಯೆ ಬಗೆಹರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ”

“ಟೊಯೊಟ ಕಾರ್ಖಾನೆ ಸಮಸ್ಯೆ ಬಗೆಹರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ”

ಬಿಡದಿ,ಜನವರಿ,31,2021(www.justkannada.in) : ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಟೊಯೊಟ ಕಾರ್ಖಾನೆಯ ಸಮಸ್ಯೆ ಬಗೆಹರಿಸುವಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.jk

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ  ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಅವರು ಭೇಟಿ ಮಾಡಿ ಅಹವಾಲು ಆಲಿಸಿದರು.Toyota,Factory,problem,resolve,Opposition,leader,Siddaramaiah,Insist ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಬಿಡದಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಬೈಕ್ ರ್ಯಾಲಿ ಮೂಲಕ ಬರ ಮಾಡಿಕೊಂಡರು. ಇದೇ ವೇಳೆ ದೂರವಾಣಿ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.Toyota,Factory,problem,resolve,Opposition,leader,Siddaramaiah,Insist ಈ ಸಂದರ್ಭ ಶಾಸಕರಾದ ರವಿ, ಸಿ.ಎಂ.ಲಿಂಗಪ್ಪ, ಮಾಜಿ ಶಾಸಕ ಮಾಗಡಿಯ ಬಾಲಕೃಷ್ಣ ಮತ್ತಿರರು ಹಾಜರಿದ್ದರು.

key words : Toyota-Factory-problem-resolve-Opposition-leader-Siddaramaiah-Insist