Saturday, August 22, 2026

BDA Apartments

Home Cinema ಫೆ.10ರಂದು ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್!

ಫೆ.10ರಂದು ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು, ಫೆ.05, 2021 (www.justkannada.in)ಬಹುನಿರೀಕ್ಷೆಯ ‘ಭಜರಂಗಿ 2’ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಫೆ.10ರಂದು ರಿಲೀಸ್ ಆಗಲಿದೆ.

ಯೆಸ್. ಎ. ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಟೀಸರ್ ರಿಲೀಸ್ ಡೇಟ್ ಅನ್ನು ಚಿತ್ರತಂಡ ಘೋಷಿಸಿದೆ.

ಫೆಬ್ರವರಿ 10ರಂದು ಸಂಜೆ 6 ಗಂಟೆಗೆ ಈ ಸಿನಿಮಾ ಮೋಷನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ವಿಷಯವನ್ನು ಹರ್ಷ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ಜಯಣ್ಣ – ಭೋಗೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.