ಬೆಂಗಳೂರು,ಜೂ,30,2019(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಅನುಮತಿ ಪಡೆದು ಅಮೇರಿಕಾ ಪ್ರವಾಸ ಕೈಗೊಳ್ಳಬೇಕಾ..? ಎಂದು ಬಿಜೆಪಿ ನಾಯಕರ ವಿರುದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಿಡಿಕಾರಿದರು.
ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಮೇರಿಕಾ ಪ್ರವಾಸ ಟೀಕಿಸಿದ ಬಿಜೆಪಿ ನಾಯಕರ ವಿರುದ್ದ ಗರಂ ಆಗಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಅನುಮತಿ ಪಡೆದು ಅಮೇರಿಕಾ ಪ್ರವಾಸ ಕೈಗೊಳ್ಳಬೇಕೆ? ಕುಮಾರಸ್ವಾಮಿ ಯಾರ ದುಡ್ಡಿನಲ್ಲೂ ಪ್ರವಾಸ ಕೈಗೊಂಡಿಲ್ಲ. ಅವರು ನಮ್ಮ ಸಮುದಾಯದ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಸಮುದಾಯದ ಕಾರ್ಯಕ್ರಮಕ್ಕೂ ಹೋಗೋದು ತಪ್ಪಾ..? ಎಂದು ಹರಿಹಾಯ್ದರು.
ನಾವು ಪಕ್ಷ ಸಂಘಟನೆಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ಅಗಸ್ಟ್ 20 ರಿಂದ ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದ್ದು ನಮ್ಮ ಪಾದಯಾತ್ರೆಯಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗಲ್ಲ, ಕಿಂಚಿತ್ತೂ ತೊಂದರೆ ಆಗದಂತೆ ಪಾದಯಾತ್ರೆಯನ್ನು ನಾನೇ ಮುಂದೇ ನಿಂತು ಕ್ರಮವಹಿಸಿ ಮಾಡ್ತೀನಿ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.
Key words: BS yeddyurappa- permission –USA-Former Prime Minister -HD Deve Gowda






