Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page “ರೈತರಿಗೆ ಕೃಷಿ ವಿವಿ  ಸಂಶೋಧನೆಗಳ ಲಾಭ ದೊರೆಯಬೇಕು : ಸಿಎಂ ಬಿ.ಎಸ್.ಯಡಿಯೂರಪ್ಪ

“ರೈತರಿಗೆ ಕೃಷಿ ವಿವಿ  ಸಂಶೋಧನೆಗಳ ಲಾಭ ದೊರೆಯಬೇಕು : ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ,ಫೆಬ್ರವರಿ,17,2021(www.justkannada.in) : ಸ್ಥಳೀಯವಾಗಿ ದೊರಕುವ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಸ್ಥಳೀಯ ಯುವ ಉದ್ಯಮಿಗಳ ಏಳಿಗೆ ಸಾಧ್ಯ. ರೈತರ ಬದುಕು ಹಸನಾಗಲು, ರೈತರಿಗೆ ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.jkಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ್ದ “ಸಹ್ಯಾದ್ರಿ ನೋನಿ ಚಹಾದ ತಂತ್ರಜ್ಞಾನ ವರ್ಗಾವಣೆ “ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಆಧಾರಿತ ಉದ್ಯಮಗಳ ಸ್ಥಾಪನೆಗೆ ನಮ್ಮ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದ್ದು, ಸ್ಥಳೀಯವಾಗಿ ದೊರಕುವ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಸ್ಥಳೀಯ ಉದ್ಯೋಗ ಸೃಷ್ಟಿಗೂ ಪೂರಕ ವಾತಾವರಣ ಸೃಷ್ಟಿಯಾಗುತ್ತದೆ ಎಂದರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಿರುವ ನವೋದ್ಯಮ ಕೇಂದ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಜಿಲ್ಲೆಯ 10 ನವೋದ್ಯಮಿಗಳಿಗೆ ಕೇಂದ್ರ ಸರ್ಕಾರದ ಅನುದಾನ ದೊರೆಯಲು ನೆರವಾಗಿದೆ. ಸರ್ಕಾರ ಈ ಹಿನ್ನೆಲೆಯಲ್ಲಿ ಎಲ್ಲಾ ನೆರವು ನೀಡಲಿದೆ ಎಂದರು.

ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಕೆ, ಅಡಿಕೆ ಹಾಳೆಯನ್ನು ಚರ್ಮದಂತೆ ಪರಿವರ್ತಿಸಿ ಉತ್ಪನ್ನ ತಯಾರಿಕೆ, ಅಂಗಾಂಶ ಕೃಷಿಯಲ್ಲಿ ಬಾಳೆ ಉತ್ಪಾದನೆ, ಮಲೆನಾಡಿನ ವಿಶೇಷ ಹಣ್ಣುಗಳಿಂದ ಆರೋಗ್ಯ ಪೂರ್ಣ ವೈನ್ ತಯಾರಿಕೆಯಂತಹ ಯೋಜನೆಗಳಿಂದ ವಿಶ್ವವಿದ್ಯಾಲಯ ನವೋದ್ಯಮಿಗಳಿಗೆ ನೆರವಾಗುತ್ತಿರುವುರುವುದು ಶ್ಲಾಘನೀಯ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ಇದೀಗ ನೋನಿ ಅಥವಾ ಇಂಡಿಯನ್ ಮಲ್ಬರಿ ಹಣ್ಣಿನಿಂದ ತಯಾರಿಸಿರುವ ನೋನಿ ಚಹಾ ವಿಶಿಷ್ಟ ಉತ್ಪನ್ನವಾಗಿದ್ದು, ಇದರಿಂದ ಈ ಭಾಗದಲ್ಲಿ ನೋನಿ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.farmers,Agricultural vv,Inventions,Profit,Must,available,CM B.S.Yeddyurappa

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೋವಿಡ್ ಹಿನ್ನೆಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ, ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ , ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ನಾಯಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

key words : farmers-Agricultural vv-Inventions-Profit-Must-available-
CM B.S.Yeddyurappa