Monday, October 12, 2026

Dasara Wishes

Mysore dasara DasraWishes_JK DasraWishes JK
Happy Dasara
Home Front Page ರಾಮಮಂದಿರಕ್ಕೆ ಬಲವಂತವಾಗಿ ದೇಣಿಗೆ ಸಂಗ್ರಹ ಆರೋಪ; ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ರೇಣುಕಾಚಾರ್ಯ ತಿರುಗೇಟು…

ರಾಮಮಂದಿರಕ್ಕೆ ಬಲವಂತವಾಗಿ ದೇಣಿಗೆ ಸಂಗ್ರಹ ಆರೋಪ; ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ರೇಣುಕಾಚಾರ್ಯ ತಿರುಗೇಟು…

ಬೆಂಗಳೂರು,ಫೆಬ್ರವರಿ,17,2021(www,justkannada.in):  ರಾಮಮಂದಿರ  ನಿರ್ಮಾಣ  ವಿಚಾರವಾಗಿ ಬಲವಂತವಾಗಿ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದು ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಯಾರೂ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ, ಬಲವಂತವಾಗಿ ದೇಣಿಗೆ ಸಂಗ್ರಹ ಮಾಡುತ್ತಿದ್ರೆ ದೂರು ಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅವರು ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ  ಟಾಂಗ್ ನೀಡಿದ್ದಾರೆ.jk

ಮಾಧ್ಯಮಗಳ ಜತೆ ಇಂದು ಮಾತನಾಡಿದ  ಶಾಸಕ ಎಂ.ಪಿ ರೇಣುಕಾಚಾರ್ಯ, ಮನೆಗಳಿಗೆ ಮಾರ್ಕ್ ಮಾಡುತ್ತಿದ್ರೆ ಎಲ್ಲಿ ಅಂತ ತೋರಿಸಿ, ದಾಖಲೆ ಕೊಡಿ, ವಿಷಯಾಂತರ ಮಾಡಬೇಡಿ. ರಾಮಮಂದಿರ ಬಹಳ ವರ್ಷಗಳ ಕನಸು. ಬಿಜೆಪಿ ಯಾವತ್ತೂ ವೋಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ, ನೀವೂ ರಾಮಮಂದಿರಕ್ಕೆ ಉದಾರ ದೇಣಿಗೆ ಕೊಡಿ. ದೇಣಿಗೆ ಕೊಟ್ಟು ರಾಮನ ಕೃಪೆಗೆ ಪಾತ್ರರಾಗಿ, ಇಂತಹ ಹೇಳಿಕೆ ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ ಎಂದು ಕಿಡಿ ಕಾರಿದರು.Accused – forcibly- collecting – ramamandir- MLA= Renukacharya - HD Kumaraswamy

Key words: Accused – forcibly- collecting – ramamandir- MLA= Renukacharya – HD Kumaraswamy