Saturday, October 17, 2026

Dasara Wishes

HD Kumaraswamy DasraWishes_JK DasraWishes JK
Happy Dasara
Home Front Page ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು,ಫೆಬ್ರವರಿ,19,2021(www.justkannada.in); ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ  ಮೈಸೂರು ಮಹಾರಾಜ ಕಾಲೇಜು ಅಪರಾಧ ಶಾಸ್ತ್ರ ವಿಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.jk

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ಅಪರಾಧ ಶಾಸ್ತ್ರ, ನ್ಯಾಯ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಐಎಎಸ್ , ಕೆಎಎಸ್ ಪರೀಕ್ಷೆಗಳಲ್ಲಿ ಐಚ್ಚಿಕ ವಿಷಯವಾಗಿ ಸೇರಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.protest-students-demanding-reservation-police-related-departments

ವೈದ್ಯ, ಇಂಜಿನಿಯರ್,  ಶಿಕ್ಷಕರು ,ಲಾಯರ್ ಮುಂತಾದ ಹುದ್ದೆಗಳಲ್ಲಿ ಆಯಾ ವಿಷಯದಲ್ಲಿ ಪದವಿ ಪಡೆದವರಿಗೆ ಉದ್ಯೋಗ ನೀಡಲಾಗುತ್ತೆ. ಆದ್ರೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದಿದ್ದರೂ ಮೀಸಲಾತಿ ನೀಡುತ್ತಿಲ್ಲ. ಅಪರಾಧ ಮತ್ತು ನ್ಯಾಯ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಯಾವುದೇ ಮೀಸಲಾತಿ ಇಲ್ಲ. ಸರ್ಕಾರ ಕೂಡಲೇ ಅಪರಾಧ ಮತ್ತು ನ್ಯಾಯ ವಿಜ್ಞಾನದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

Key words: Protest – students –demanding- reservation – police – related- departments