Thursday, August 13, 2026

BDA Apartments

Home Front Page ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? : ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶ

ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? : ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು,ಫೆಬ್ರವರಿ,23,2021(www.justkannada.in) : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.

 

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ.

B.S.Y-They-Whom-you-protecting?-People?-Are you corrupt?-Opposition-Leader-Siddaramaiah-Outrage

ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿಎಂ ಬಿ.ಎಸ್.ವೈ ಅವರನ್ನು ಒತ್ತಾಯಿಸುವೆ.

ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆಕಾರ್ಮಿಕರು ಬಲಿ 

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ.

key words : B.S.Y-They-Whom-you-protecting?-People?-Are you corrupt?-Opposition-Leader-Siddaramaiah-Outrage