Sunday, August 23, 2026

BDA Apartments

Home Front Page ರಮೇಶ್ ಜಾರಕಿಹೊಳಿ ಅವರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ- ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿ… 

ರಮೇಶ್ ಜಾರಕಿಹೊಳಿ ಅವರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ- ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿ… 

ಬೆಂಗಳೂರು,ಮಾರ್ಚ್,4,2021(www.justkannada.in): ರಾಸಲೀಲೆ ವಿಡಿಯೋ ಸಿಡಿ ಪ್ರಕರಣದಲ್ಲಿ ಸಿಲುಕಿ ಈಗಾಗಲೇ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಅವರನ್ನ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.jk

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.  ಸರ್ಕಾರ ಅಸ್ಥಿತ್ವಕ್ಕೆ ಬರಲು ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಪ್ರಕರಣ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ ಸಂಪುಟಕ್ಕೆ ಸೆರಿಸಿಕೊಳ್ಳಿ ಎಂದು ಹೇಳಿದ್ದಾರೆ. join-Ramesh jarakihili – cabinet-Shri Valmiki Prasanananda Swamiji.

ಸಂಪುಟದಲ್ಲಿ ಉಳಿಸಿಕೊಂಡೇ ಪ್ರಕರಣ ತನಿಖೆ ನಡೆಸಬಹುದಿತ್ತು. ಏಕಾಏಕಿ ರಾಜೀನಾಮೆ ಅಂಗೀಕಾರ ಮಾಡಬಾರದಿತ್ತು. ರಮೇಶ್ ಜಾರಕಿಹೊಳಿ ರಾಜಿನಾಮೆಯನ್ನು ತರಾತುರಿಯಲ್ಲಿ ಸ್ವೀಕರಿಸಬಾರದಿತ್ತು. ಈಗಲೂ ಕಾಲ ಮಿಂಚಿಲ್ಲ. ರಮೇಶ್ ಜಾರಕಿಹೊಳಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Key words: join-Ramesh jarakihili – cabinet-Shri Valmiki Prasanananda Swamiji.