Wednesday, August 26, 2026

BDA Apartments

Home Front Page ‘ಏಕಪತ್ನಿವ್ರತಸ್ಥ’ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಕಿಡಿ: ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ….

‘ಏಕಪತ್ನಿವ್ರತಸ್ಥ’ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಕಿಡಿ: ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ….

ಬೆಂಗಳೂರು,ಮಾರ್ಚ್,25,2021(www.justkannada.in):  ಏಕಪತ್ನಿವ್ರತಸ್ಥ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.jk

ಸಚಿವ ಸುಧಾಕರ್ ಹೇಳಿಕೆ ಖಂಡಿಸಿ ಗೃಹ ಕಚೇರಿ ಕೃಷ್ಣಾ ಎದುರು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಸಚಿವ  ಸುಧಾಕರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.minister-sudhakar-statement-protest-congress-women-unit

ಈ ವೇಳೆ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮಹಿಳಾ ಪೊಲೀಸರು ಪ್ರತಿಭಟನಾಕಾರರನ್ನ ವಾಹನದಲ್ಲಿ ಕರೆದೊಯ್ದು ಬೇರೆಡೆಗೆ ರವಾನಿಸಿದರು.

Key words: Minister- Sudhakar- statement-Protest – Congress Women Unit.