Sunday, August 23, 2026

BDA Apartments

Home Front Page ದೇಶದಲ್ಲಿ ಒಂದೇ ದಿನ 89,129 ಹೊಸ ಕೋವಿಡ್ ಪ್ರಕರಣ ಪತ್ತೆ…

ದೇಶದಲ್ಲಿ ಒಂದೇ ದಿನ 89,129 ಹೊಸ ಕೋವಿಡ್ ಪ್ರಕರಣ ಪತ್ತೆ…

ನವದೆಹಲಿ,ಏಪ್ರಿಲ್,3,2021(www.justkannada.in):  ದೇಶದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈಗಾಗಲೇ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ದೇಶದಲ್ಲಿ ಒಂದೇ ದಿನ 89,129  ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.Illegally,Sand,carrying,Truck,Seized,arrest,driver

 ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,129 ಹೊಸ ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 714 ಮಂದಿ ಮೃತಪಟ್ಟಿದ್ದಾರೆ. 44,202 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.89,129 -new covid -cases -detected - single day

ಕೊರೋನಾದಿಂದ ಈವರೆಗೆ 1,64,110 ಮಂದಿ ಸಾವನ್ನಪ್ಪಿದ್ದಾರೆ.  ಈವರೆಗೂ ಒಟ್ಟು 1,15,69,241 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 6,58,909 ಸಕ್ರಿಯ ಪ್ರಕರಣಗಳಿವೆ. ಈವರೆಗೆ 7.30 (7,30,54,295) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Key words: 89,129 -new covid -cases -detected – single day